ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೈಸೂರು ಭೇಟಿ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೈಸೂರು ಭೇಟಿ

ಮೈಸೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಬಂದರು.

ಬೆಳಗ್ಗೆ 8 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದು, ಆ ಬಳಿಕ ಜಿಲ್ಲಾ ಕೋರ್ ಸಮಿತಿ, ಬಿಜೆಪಿ ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸುವರು.