ಅಮಿತ್ ಶಾ ಹೇಳಿಕೆ ಪುನರುಚ್ಛರಿಸಿದ ಅರುಣ್ ಸಿಂಗ್; ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎಂದ ರಾಜ್ಯ ಉಸ್ತುವಾರಿ

ನವದೆಹಲಿ: ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಂಬರುವ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ದಾರೆ.
ಪಾಲಿಕೆ ಚುನಾವಣೆ ಗೆಲುವಿನ ಬೆನ್ನಲ್ಲೇ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ಮುಖಂಡರು ದೆಹಲಿಯಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಮಾತನಾಡಿದ ಅರುಣ್ ಸಿಂಗ್, ಬೊಮ್ಮಾಯಿ ನೇತೃತ್ವದಲ್ಲಿ ಪಾಲಿಕೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಅಮಿತ್ ಶಾ ಹೇಳಿದಂತೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಕೂಡ ಬೊಮ್ಮಾಯಿ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದರು.
ಈ ವಿಚಾರದಲ್ಲಿ ಹಿರಿಯ ಬಿಹೆಪಿ ನಾಯಕರು ಸಿಟ್ಟಾಗುವ ಅಗತ್ಯವಿಲ್ಲ, ಕರ್ನಾಟಕದಲ್ಲಿ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದಾರೆ. ಅವರ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಚುನಾವಣೆಗೆ ಹೋಗುತ್ತೇವೆ ಇದರಲ್ಲಿ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.