"ರಾಣ" ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟ
ಬೆಂಗಳೂರು: ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ. ನಂದ ಕಿಶೋರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದಾರೆ.
ಈ ಹಿಂದೆ ಇವರಿಬ್ಬರ ಕಾಂಬಿನೇಶ್ ನ "ಪೊಗರು" ಚಿತ್ರದ ಆಡಿಯೋ ಹಕ್ಕು ಕೂಡಾ ಆನಂದ್ ಆಡಿಯೋಗೆ ಹೆಚ್ಚು ಮೊತ್ತಕ್ಕೆ ಮಾರಾಟವಾಗಿತ್ತು. ಈಗ ಇದೇ ಜೋಡಿಯ "ರಾಣ" ಚಿತ್ರದ ಆಡಿಯೋ ರೈಟ್ ಸಹ ಉತ್ತಮ ಮೊತ್ತಕ್ಕೆ ಮಾರಾಟವಾಗಿರುವುದಕ್ಕೆ ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೇಯಸ್ಸ್ ಗೆ ನಾಯಕಿಯರಾಗಿ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಕೆ. ಮಂಜು ಅರ್ಪಿಸುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ರಾಣ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.