ಅ. 7 ರಂದು ನಾಡಹಬ್ಬ ದಸರಾ ಉದ್ಘಾಟನೆ | Mysore |

ಮೈಸೂರಿನ ಅರಮನೆ ಮಂಡಳಿ ಸಭಾಂಗಣದಲ್ಲಿ ಮೈಸೂರು ಉಸ್ತುವಾರಿ ಹಾಗೂ ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಬುಧವಾರದಂದು ವಿಶ್ವ ವಿಖ್ಯಾತ ಮೈಸೂರು ದಸರಾ-2021ರ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ವಿಶ್ವವಿಖ್ಯಾತ ಮೈಸೂರು ದಸರಾಗೆ ಸೆ.13 ರಂದು ಗಜಪಯಣಕ್ಕೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಗುವುದು. ಸೆ. 16 ರಂದು 8 ಆನೆಗಳು ಈ ಬಾರಿ ದಸರೆಗೆ ಮೈಸೂರು ಅರಮನೆಗೆ ಆಗಮಿಸಲಿದೆ. ಆನೆಗಳ ಪೆÇೀಷಣೆಗೆ 50 ಲಕ್ಷ ರೂ. ಮೀಸಲಿಡಲಾಗಿದೆ. ಅ. 7 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ, ಅಕ್ಟೋಬರ್ 15ರ ಸಂಜೆ 4:36 ರಿಂದ 04:44ರವರೆಗೆ ನಂದಿ ಪೂಜೆ, ಬಳಿಕ ಸಂಜೆ 5:00 ರಿಂದ 05:36ರ ವರೆಗೆ ಜಂಬೂ ಸವಾರಿ ನಡೆಯಲಿದೆ. ಈ ಬಾರಿ ನಗರದ ಒಳಗೆ 100 ಕಿ.ಮೀ. ಮಾತ್ರ ವಿದ್ಯುತ್ ದೀಪಾಲಂಕಾರ, 3 ಸ್ಥಬ್ದಚಿತ್ರಗಳಿಗೆ ಅವಕಾಶ ನೀಡಲಾಗಿದೆ. ಅಕ್ಟೋಬರ್ 17ರಂದು ಗಜಪಡೆಗೆ ಬೀಳ್ಕೊಡುಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸಂಸದ ಪ್ರತಾಪ್‍ಸಿಂಹ, ಶಾಸಕ ಎಸ್.ಎ.ರಾಮದಾಸ್, ಜಿ.ಟಿ.ದೇವೆಗೌಡ, ಕೆ.ಟಿ.ಶ್ರೀಕಂಠೇಗೌಡ, ನಿರಂಜನ್ ಕುಮಾರ್, ಎಲ್.ನಾಗೇಂದ್ರ, ಹರ್ಷವರ್ಧನ್, ಮೇಯರ್ ಸುನಂದಾ ಪಾಲನೇತ್ರ, ವಿವಿಧ ನಿಗಮ ಮಂಡಳಿ ಅಧ್ಯಕ್ಷರುಗಳಾದ ಹೆಚ್.ವಿ.ರಾಜೀವ್, ಫಣೀಶ್, ಅಪ್ಪಣ್ಣ, ಎ.ಹೇಮಂತ್ ಕುಮಾರ್ ಗೌಡ, ಮಹದೇವಸ್ವಾಮಿ, ಕೃಷ್ಣಪ್ಪಗೌಡ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್.ಪಿ. ಆರ್. ಚೇತನ್, ಜಿಲ್ಲಾ ಪಂಚಾಯತ್ ಸಿ.ಇ.ಒ. ಎ.ಎಂ.ಯೋಗೀಶ್, ಡಿಸಿಎಫ್ ಕರಿಕಾಳನ್, ಎಡಿಸಿ ಡಾ. ಬಿಎಸ್. ಮಂಜುನಾಥಸ್ವಾಮಿ, ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.