ಭೀಕರ ಅಗ್ನಿ ಅವಘಡ: ಒಬ್ಬ ಸಾವು, ಹಲವರಿಗೆ ಗಾಯ

ಪಾಲ್ಗಾರ್: ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದಾರೆ. ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದರ ತೀವ್ರತೆ ಹೆಚ್ಚಾಗಿ ಸ್ಫೋಟವಾಗಿದೆ.
ವಿಚಾರ ತಿಳಿಯುತ್ತಿದ್ದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನು ಘಟನೆಯಲ್ಲಿ ಅಲ್ಲಿದ್ದ ಕಾರ್ಮಿಕರ ಪೈಕಿ ನಾಲ್ಕು ಮಂದಿ ಗಾಯಗೊಂಡಿದ್ದು, ಓರ್ವನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತಂದಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು ಹಲವರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.