'BBMP' ಯಿಂದ 3673 ಪೌರಕಾರ್ಮಿಕರ 'ತಾತ್ಕಾಲಿಕ ನೇಮಕಾತಿ' ಪಟ್ಟಿ ಬಿಡುಗಡೆ

'BBMP' ಯಿಂದ 3673 ಪೌರಕಾರ್ಮಿಕರ 'ತಾತ್ಕಾಲಿಕ ನೇಮಕಾತಿ' ಪಟ್ಟಿ ಬಿಡುಗಡೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3673 ಪೌರಕಾರ್ಮಿಕರ ನೇರ ನೇಮಕಾತಿ ಸಂಬಂಧ ಈಗಾಗಲೇ ಅರ್ಜಿಯನ್ನು ಸ್ವೀಕರಿಸಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಹೊರಡಿಸಿದೆ. ಅದಕ್ಕೆ ಮಾರ್ಚ್ 3ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಈ ವೇಳೆ ಪೌರಕಾರ್ಮಿಕ ಸಂಘಟನೆಗಳು ಮತ್ತು ಪೌರಕಾರ್ಮಿಕರು ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದು, ಈ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ, ದಾಖಲಾತಿಗಳ ನೈಜತೆಯನ್ನು ಪರಿಶೀಲಿಸಿ ನಂತರ ಮುಂದಿನ ಅಗತ್ಯ ಕ್ರಮವಹಿಸಿ ಅಂತಿಮ ಪಟ್ಟಿಯನ್ನು ಹೊರಡಿಸಲಾಗುವುದು ಎಂದು ಪ್ರಕಟಣೆ ಮೂಲಕ ಅಧಿಕಾರಿಗಳು ತಿಳಿಸಿದ್ದಾರೆ.

ಆದ್ದರಿಂದ, ಅರ್ಜಿ ಸಲ್ಲಿಸಿರುವ ಯಾವುದೇ ಅರ್ಹ ಪೌರ ಕಾರ್ಮಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಆಡಳಿತ ಹಾಗೂ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ನೇಮಕಾತಿ ಮತ್ತು ವಿಚಾರಣೆ ಪ್ರಕ್ರಿಯೆಯ ಸದಸ್ಯ ಕಾರ್ಯದರ್ಶಿಯಾದ ಡಾ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3673 ಪೌರಕಾರ್ಮಿಕರ ನೇರ ನೇಮಕಾತಿ ಸಂಬಂಧ ಈಗಾಗಲೇ ಅರ್ಜಿಯನ್ನು ಸ್ವೀಕರಿಸಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಹೊರಡಿಸಿದೆ. ಅದಕ್ಕೆ ದಿನಾಂಕ: 02.03.2023ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಈ ವೇಳೆ ಪೌರಕಾರ್ಮಿಕ ಸಂಘಟನೆಗಳು ಮತ್ತು ಪೌರಕಾರ್ಮಿಕರು ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದು, ಈ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ, ದಾಖಲಾತಿಗಳ ನೈಜತೆಯನ್ನು ಪರಿಶೀಲಿಸಿ ನಂತರ ಮುಂದಿನ ಅಗತ್ಯ ಕ್ರಮವಹಿಸಿ ಅಂತಿಮ ಪಟ್ಟಿಯನ್ನು ಹೊರಡಿಸಲಾಗುವುದು ಎಂದು ಪ್ರಕಟಣೆ ಮೂಲಕ ಅಧಿಕಾರಿಗಳು ತಿಳಿಸಿದ್ದಾರೆ.