ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಡಿ. 27 ಕ್ಕೆ ಮತದಾನ

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ.
ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.
ಡಿಸೆಂಬರ್ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದ್ದು, ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.