ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ,
ಚಿಕ್ಕಮಗಳೂರು.
ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮಧ್ಯದ ನಡೆತಿರೋ ಮುಸುಕಿನ ಗುದ್ದಾಟದ ವಿಚಾರದಲ್ಲಿ ತಾವು ತಲೆ ಹಾಕುವುದಿಲ್ಲ ಅಂತಾ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಯಾರಿಗೆ ಉಸ್ತುವಾರಿ ಕೊಡ್ಬೇಕು ಅನ್ನೋದು ಸಿಎಂ ವಿವೇಚನೆಗೆ ಬಿಟ್ಟದ್ದು. ಆಯಾ ಜಿಲ್ಲೆಯ ಪರಿಸ್ಥಿತಿ ಆಧರಿಸಿ, ಅವರು ತೀರ್ಮಾನ ತೆಗೆದುಕೊಳ್ತಾರೆ. ಇದರ ಬಗ್ಗೆ ನಾವೇನೂ ಹೇಳಲು ಹೋಗುವುದಿಲ್ಲ ಎಂದರು. ಪಕ್ಷ ಅಭಿಪ್ರಾಯ, ಸಲಹೆ ಕೇಳಿದರೆ, ಅದನ್ನು ನೀಡಲು ಪಕ್ಷದ ರಾಜ್ಯಾಧ್ಯಕ್ಷ ಕಟೀಲ್, ಉಸ್ತುವಾರಿ ಅರುಣ್ ಸಿಂಗ್ ಅವರು ಇದ್ದಾರೆ. ಅವರು ಸಲಹೆ ನೀ ಡುತ್ತಾರೆ ಎಂದು ಜಾರಿಕೊಂಡರು.