ಸಿದ್ದರಾಮಯ್ಯರ ದಲಿತ ವಿರೋಧಿ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಕೆಂಡಾಮಂಡಲ

ವಿಪಕ್ಷ ನಾಯಕ ಸಿದ್ದರಾಮಯ್ಯರ ದಲಿತ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಕೊಪ್ಪಳದ ಅಶೋಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದಲಿತ ಸಮುದಾಯದ ನಾಯಕರು ಹೊಟ್ಟೆಯ ಪಾಡಿಗಾಗಿ ಬಿಜೆಪಿ ಪಕ್ಷ ಸೇರುತ್ತಿದ್ದಾರೆಂದು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ವಾಪಸ್ಸು ಪಡೆಯುವಂತೆ ಒತ್ತಾಯಿಸಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.