ಅಣ್ಣನ ಮೇಲೆ ಶಕ್ತ ಪ್ರದರ್ಶನ ತೋರಿದ ಬಿಜೆಪಿ ಮುಖಂಡ

ಬೀದರ ಜಿಲ್ಲೆಯ ಹುಮನಾಬಾದನಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಅವರ ಜನ್ಮದಿನದ 44ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಭಗವಂತ ಖೂಬಾ ಮತ್ತು ಬಿಜೆಪಿ ಹಿರಿಯ ನಾಯಕರ ಸಮುಖದಲ್ಲಿ ಗೆಳೆಯರ ಬಳಗದ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡು ಅಣ್ಣನಿಗೆ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ಡಾ.ಸಿದ್ದು ಪಾಟೀಲ ಅವರನ್ನು ಸನ್ಮಾನಿಸಿ, ಮಾತನಾಡಿದ ಕೇಂದ್ರ ಸಚಿವ ಭಗವಂತ ಖೂಬಾ ಡಾ.ಸಿದ್ದು ಪಾಟೀಲ ತಾಳ್ಮೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ ಎಂದರು. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸುಭಾಷ ಕಲ್ಲೂರ ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ ಮೇಲೆ ವಾಗ್ದಾಳಿ ನಡೆಸಿದರು.