ಹಾನಗಲ್, ಸಿಂದಗಿಯಲ್ಲೂ ಬಿಜೆಪಿ ಗೆಲುವು ಖಚಿತ: ಶೆಟ್ಟರ್
ಹುಬ್ಬಳ್ಳಿ
ಮೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಆ ಹಿನ್ನೆಲೆಯಲ್ಲಿ ಈ ಎರಡು ಉಪಚುನಾವಣೆ ಗೆಲುವು ವಿಶ್ವಾಸ ಹೊಂದಿದ್ದೇವೆ. ಯೋಗ್ಯ ಅಭ್ಯರ್ಥಿಗಳನ್ನು ನಿಲ್ಲಿಸಿ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಇದೀಗ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಧ್ಯಕ್ಷರು ಕಾರ್ಯಕಾರಿಣಿ ಸಭೆ ಕರೆಯುವರು ಅಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ಯಾವಾಗಲೂ ಒಬ್ಬ ವ್ಯಕ್ತಿಮೇಲೆ ಅವಲಂಬಿತವಾದ ಪಕ್ಷ ಅಲ್ಲಾ. ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲಿಯೇ ಲಕ್ಷಾಂತರ ಕಾರ್ಯಕರ್ತರ ಪಡೆಯಿಂದ ನಡೆಯುತ್ತದೆ ಎಂದರು