BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಮೆಜೆಸ್ಟಿಕ್‌ನಿಂದ ಚಿಕ್ಕಬಳ್ಳಾಪುರಕ್ಕೆ ಎಸಿ ಬಸ್ ಸಂಚಾರ ಆರಂಭ

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಮೆಜೆಸ್ಟಿಕ್‌ನಿಂದ ಚಿಕ್ಕಬಳ್ಳಾಪುರಕ್ಕೆ ಎಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಇದೀಗ ಸಂಸ್ಥೆ ಮತ್ತೊಂದು ಹೊಸ ಹೆಜ್ಜೆಯನ್ನು ಇರಿಸಿದೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಚಿಕ್ಕಬಳ್ಳಾಪುರ ಬಸ್‌ ನಿಲ್ದಾಣಕ್ಕೆ ಹವಾನಿಯಂತ್ರಿತ ಸಾರಿಗೆಗಳ ಸಂಚಾರವನ್ನು ಆರಂಭಿಸುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ದಿನಾಂಕ 21.03.2023 ರಿಂದ ಜಾರಿಗೆ ಬರುವಂತೆ ಕೆಂಪೇಗೌಡ ಬಸ್‌ ನಿಲ್ದಾಣದಿಂದ, ಹೆಬ್ಬಾಳ, ಯಲಹಂಕ, ರಾಣಿಕ್ರಾಸ್/ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಬಸ್‌ ನಿಲ್ದಾಣಕ್ಕೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಪರಿಚಯಿಸಿ ಪ್ರಾಯೋಗಿಕವಾಗಿ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಅಂದಹಾಗೇ ಮೆಜೆಸ್ಟಿಕ್ ನಿಂದ ಚಿಕ್ಕಬಳ್ಳಾಪುರಕ್ಕೆ ಹೊಸದಾಗಿ ಮಾರ್ಗ ಸಂಖ್ಯೆ ವಿ-298ಎಂಎನ್ ಬಸ್ ಗಳ ಸಂಚಾರವನ್ನು ಇಂದಿನಿಂದ ಆರಂಭಿಸಲಿದೆ.