'BPL' ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

'BPL' ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ರಾಜ್ಯದ ಜನರಿಗೆ ಉಚಿತ ಆಹಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿ( BPL Ration Card ) ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಕಾರ್ಡಗಳಿಗಾಗಿ ಹೊಸದಾಗಿ ಅರ್ಜಿಯನ್ನು ಅನೇಕ ಅರ್ಹ ಫಲಾನುಭವಿ ಕುಟುಂಬಗಳಿಂದ ಸಲ್ಲಿಸಲಾಗಿದೆ.

ಆದ್ರೇ ರಾಜ್ಯ ಸರ್ಕಾರ ಮಾತ್ರ ಈ ಬಾರಿ ಅರ್ಧದಷ್ಟು ಅರ್ಜಿಗಳನ್ನು ಮಾತ್ರ ಪರಿಗಣಿಸುವಂತೆ ಆದೇಶಿಸಿದ್ದು, ಇದರಿಂದಾಗಿ ಅರ್ಹ ಬಿಪಿಎಲ್ ಪಡಿತರ ಚೀಟಿ ಪಡೆಯೋ ನಿರೀಕ್ಷೆಯಲ್ಲಿದ್ದಂತ ಜನರಿಗೆ ಬಿಗ್ ಶಾಕ್ ನೀಡಿದಂತೆ ಆಗಿದೆ.

ಈ ಸಂಬಂಧ ರಾಜ್ಯ ಸರ್ಕಾರ ( Karnataka Government ) ಆದೇಶದಲ್ಲಿ ಆಹಾರ ಇಲಾಖೆಗೆ ಸೂಚಿಸಿದೆ ಎನ್ನಲಾಗಿದೆ. ಸಲ್ಲಿಕೆಯಾದಂತ 4.76 ಲಕ್ಷ ಅರ್ಜಿಗಳ ಪೈಕಿ ಕೇವಲ 2.76 ಲಕ್ಷ ಅರ್ಜಿಗಳನ್ನು ಮಾತ್ರವೇ ಪರಿಗಣಿಸುವಂತೆ ಸೂಚಿಸಿದೆ ಎನ್ನಲಾಗಿದೆ.

ಇನ್ನೂ 2.76 ಲಕ್ಷ ಅರ್ಜಿಗಳನ್ನು ಬಿಪಿಎಲ್ ಕಾರ್ಡ್ ನೀಡೋದಕ್ಕೆ ಪರಿಗಣಿಸಿದ್ದರೇ, 1.55 ಲಕ್ಷ ಕುಟುಂಬಗಳಿಗೆ ಎಪಿಎಲ್ ಕಾರ್ಡ್ ವಿತರಣೆಗಾಗಿ ಅರ್ಜಿಯನ್ನು ಪರಿಗಣಿಸಲಾಗಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ನೀಡಿದೆ.