'BSY' ಗೆ ಇಂದು 80 ನೇ ವರ್ಷದ ಹುಟ್ಟು ಹಬ್ಬ: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ

'BSY' ಗೆ ಇಂದು 80 ನೇ ವರ್ಷದ ಹುಟ್ಟು ಹಬ್ಬ: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಇಂದು 80 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬಿಎಸ್‌ ವೈ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿನೋಬ ನಗರದಲ್ಲಿರುವ 7 ನೇ ಕ್ರಾಸ್ ನಲ್ಲಿ ಅವರ ಮನೆಗೆ ಬೆಳಗ್ಗೆಯಿಂದಲೇ ಅಭಿಮಾನಿಗಳು ಶುಭಕೋರಲು ಆಗಮಿಸುತ್ತಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ.ಈ ವೇಳೆ ಅಭಿಮಾನಿಗಳಿಂದ ಬಿ.ಎಸ್ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ಸಿಕ್ಕಿತ್ತು.

ನಂತರ ಮಾತನಾಡಿದ ಅವರು, ಇದೊಂದು ವಿಶೇಷ ದಿನವಾಗಿದೆ. ಈ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾಗಿದೆ. ಮುಂದಿನ ಬಾರಿಯೂ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಪಣ ತೊಟ್ಟಿದ್ದೇವೆ ಎಂದರು.
ನಾನು ಹೇಳುವುದಿಷ್ಟೆ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು. ಇದಕ್ಕಾಗಿ ನಾವೆಲ್ಲ ಶ್ರಮಿಸಬೇಕಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದಾರೆ.