ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆ: ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತಚಲಾವಣೆ | Hubli |

ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ನಗರದ ರೈಲ್ವೆ ಸ್ಟೇಷನ್ ರಸ್ತೆಯ ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮತದಾನ ಮಾಡುವ ಮೂಲಕ ಪರಷತ್ ಸಭಾಯತಿಯವರು ತಮ್ಮ ಹಕ್ಕನ್ನು ಚಲಾಯಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ ತಮ್ಮ ಸಂವಿಧಾನಿಕ ಮತದಾನದ ಹಕ್ಕನ್ನು ಚಾಲಾಯಿಸುತ್ತಿದ್ದಾರೆ. ಇನ್ನೂ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಕೊಂಡಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಒಟ್ಟು 82 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇನ್ನೂ 420 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿ ಉಳಿದುಕೊಂಡಿದ್ದು, ಮಹಾನಗರ ಪಾಲಿಕೆಯ 82 ವಾರ್ಡ್ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಪಾಲಿಕೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ