ಮಳೆಯ ಆರ್ಭಟಕ್ಕೆ ಬಸವನಪುರ ವಾರ್ಡ್ ನ ಸ್ವತಂತ್ರ ನಗರ ಜಲಾವೃತ
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ನಾನಾ ಭಾಗಗಳು ಸಂಪೂರ್ಣ ಜಲಾವೃತವಾಗಿ ಸಾರ್ವಜನಿಕರು ತೊಂದರೆಗೀಡಾಗಿದರು. ಕೆ ಆರ್ ಪುರದ ಬಸವನಪುರ ವಾರ್ಡ್ ನ ಸ್ವತಂತ್ರ ನಗರದಲ್ಲಿ ಮಳೆ ಅವಾಂತರಕ್ಕೆ ಸಾರ್ವಜನಿಕರು ರಾತ್ರಿಯಿಡೀ ಜಾಗರಣೆ ಮಾಡಿ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದರು. ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಯ ಆರ್ಭಟಕ್ಕೆ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರಿ ನುಗ್ಗಿ ಅವಾಂತರವನ್ನೇ ಸೃಷ್ಟಿಸಿದೆ. ಪ್ರತಿ ಮಳೆಗೂ ಒಂದಲ್ಲ ಒಂದು ಅವಾಂತರ ಸೃಷ್ಟಿಯಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಸಮಸ್ಯೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಕೆರೆಗೆ ಯಥೇಚ್ಛವಾಗಿ ಮ್ಯಾನ್ ಹೋಲ್ ನಿಂದ ಕೊಳಚೆನೀರು ಸೇರುತ್ತಿವೆ. ಕೆರೆಯ ನೀರು ಹಸಿರು ಬಣ್ಣಕ್ಕೆ ತಿರುಗುತ್ತಿದೆ. ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರ ಸ್ವಕ್ಷೇತ್ರದಲ್ಲೇ ಇಂತಹ ಸಮಸ್ಯೆಗಳು ತಾಂಡವಾಡುತ್ತಿದ್ದರೂ. ಸಚಿವರು ಮಾತ್ರ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ತಲ್ಲೀನ ರಾಗಿದ್ದಾರೆ. ಸಮಸ್ಯೆಗಳ ಕುರಿತು ಸ್ಥಳೀಯ ಪಾಲಿಕೆ ಮಾಜಿ ಸದಸ್ಯರಿಗೆ ತಿಳಿಸಿದರು ಪ್ರಯೋಜನವಿಲ್ಲ. ಕಾಟಚಾರಕ್ಕೆ ಬಂದು ಸಮಸ್ಯೆ ಬಗೆಹರಿಸುದಾಗಿ ಭರವಸೆ ನೀಡಿ ಹೋದರು ಮತ್ತೆ ಇತ್ತಕಡೆ ಮುಖ ಮಾಡಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆರೆ ಉಳಿವಿಗೆ ಸಹಕರಿಸಬೇಕಾಗಿದೆ ಎಂಬುದು ಸಾರ್ವಜನಿಕರ ಕಳಕಳಿಯಾಗಿದೆ