1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ

1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ

ಬೆಂಗಳೂರು: ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ಸದ್ಯ ಯಾವುದೇ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರ‍್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಅಗತ್ಯ ನೆರವು ಸಿಗಲಿದೆ. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಅಧ್ಯಯನ ನಡೆಲು ಬಂದಿರುವ ಕೇಂದ್ರ ಅಧ್ಯಯನ ತಂಡದ ಜೊತೆ ಸಚಿವ ಸಂಪುಟ ಸಭೆಯ ಬಳಿಕ ಪೂರ್ವಭಾವಿ ಚರ್ಚೆ ನಡೆಸಲಾಗುವುದು ಎಂದರು.