ಬೆಳಗಾವಿ ಮಹಾನಗರ ಪಾಲಿಕೆ ಬಹುತೇಕ ಬಿಜೆಪಿ ಪಾಲಿಗೆ; 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು
ಬೆಳಗಾವಿ: ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಬಿಜೆಪಿ ಗೆಲುವು ಸಾಧಿಸಿದೆ. ಎಂಇಎಸ್ ಗೆ ಮುಖಭಂಗವಾಗಿದೆ 24 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ 24 ವಾರ್ಡ್ ಗಳಲ್ಲಿ ಬಿಜೆಪಿ ಜಯಗಳಿಸಿದ್ದು, ಕಾಂಗ್ರೆಸ್ 5, ಎಂಇಎಸ್ 2, ಪಕ್ಷೇತರ 4 ಹಾಗೂ ಎಐಎಂಐಎಂ ಒಂದು ವಾರ್ಡ್ ನಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬೆಳಗಾವಿ ಪಾಲಿಕೆಯಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರದತ್ತ ದಾಪುಗಾಲಿಟ್ಟಿದ್ದು, ಇತಿಹಾಸ ನಿರ್ಮಿಸಲು ಮುಂದಾಗಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಕಲಬುರ್ಗಿ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ 7, ಬಿಜೆಪಿ 5, ಪಕ್ಷೇತರರು 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದರೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 20 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 12 ವಾರ್ಡ್ ಗಳಲ್ಲಿ, ಪಕ್ಷೇತರರು ಮೂರು ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.