ಬೆಳಗಾವಿ ಮಹಾನಗರ ಪಾಲಿಕೆ: ಚುನಾವಣೆಗೆ ಅಧಿಸೂಚನೆ ಪ್ರಕಟ

ಬೆಳಗಾವಿ ಮಹಾನಗರ ಪಾಲಿಕೆ: ಚುನಾವಣೆಗೆ ಅಧಿಸೂಚನೆ ಪ್ರಕಟ

ಬೆಳಗಾವಿ ಮಹಾನಗರ ಪಾಲಿಕೆ: ಚುನಾವಣೆಗೆ ಅಧಿಸೂಚನೆ ಪ್ರಕಟ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ.
ಮೊದಲ ದಿನದಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಆದರೆ, ಯಾರೂ ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಆ. ೨೩ ಕೊನೆಯ ದಿನವಾಗಿದೆ. ಆ.೨೪ರಂದು ಪರಿಶೀಲನೆ ನಡೆಯಲಿದೆ. ಆ.೨೬ರಂದು ಹಿಂಪಡೆಯಲು ಕೊನೆಯ ದಿನವಾಗಿದೆ. ಸೆ. ೩ರಂದು ಮತದಾನ ಹಾಗೂ ಅಗತ್ಯಬಿದ್ದರೆ ಮರು ಮತದಾನವನ್ನು ಸೆ.೫ರಂದು ನಡೆಸಲಾಗುತ್ತದೆ. ಸೆ.೬ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿಶ್ವೇಶ್ವರಯ್ಯ ನಗರ ಉಪ ವಿಭಾಗ ಕಚೇರಿ, ಅಶೋಕ ನಗರ, ಮಹಾನಗರ ಪಾಲಿಕೆ ಮುಖ್ಯ ಕಚೇರಿ, ಕೋನವಾಳ ಗಲ್ಲಿ, ಗೋವಾವೇಸ್ ವೃತ್ತದ ಪಾಲಿಕೆ ಸಂಕೀರ್ಣದಲ್ಲಿ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ವಾರ್ಡ್ಗಳಿಗೆ ಸಂಬAಧಿಸಿದAತೆ ಈ ಸ್ಥಳದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ನಿಯೋಜಿತ ಅಧಿಕಾರಿಗಳು ನಾಮಪತ್ರ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.