ಹುಣಸೂರು: ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಹುಣಸೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ.
ಮೈಲಾಂಬೂರು ಗ್ರಾಮದ ರಾಜೇಗೌಡ (55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ ರವಿ (35) ಮೃತ ದುರ್ದೈವಿಗಳು. ಹುಣಸೂರು ಕಡೆಯಿಂದ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.