ಬಡ ಹೆಣ್ಣು ಮಕ್ಕಳಿಗೆ ಬೈಸಿಕಲ್ ವಿತರಣೆ

ಕೈಲಾಸ್ ಸತ್ಯರ್ಥಿ ಚಿಲ್ಡ್ರನ್ ಫೌಂಡೇಶನ್ ಮತ್ತು ಸೃಷ್ಟಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಸೈಕಲ್ ವಿತರಣೆ ಮಾಡಲಾಯಿತು. ಗುಂಡ್ಲುಪೇಟೆ ತಾಲ್ಲೂಕು ಹಂಗಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಮಾಜಿ ಕಾಡಾ ಅಧ್ಯಕ್ಷರಾದ ಹೆಚ್ ಎಸ್ ನಂಜಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ನೆರವಾಗುವ ನಿಟ್ಟಿನಿಲ್ಲಿ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಂಚಾಯಿತಿ ಸದಸ್ಯ ವೃಷಭೇಂದ್ರ, ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.