ನವಜಾತ ಶಿಶು ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕಿಮ್ಸ್ನಲ್ಲಿ ಪ್ರತ್ಯಕ್ಷ.

ಹಣಕ್ಕಾಗಿ ನವಜಾತ ಶಿಶುವಿನ ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿಜಯಪುರ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಗಂಡು ಮಗು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದೆ. ಮಗುವಿಗೆ ಅನಾರೋಗ್ಯವಾದ ಕಾರಣ ಮಗು ಕಿಮ್ಸ್ ಗೆ ದಾಖಲಿಸಲಾಗಿದ್ದು, ಮಗು ಮಾರಾಟಕ್ಕೆ ತೆಗೆದುಕೊಂಡವರಿಂದಲೇ ಕಿಮ್ಸ್ ನಲ್ಲಿ ಮಗು ದಾಖಲಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಮಕ್ಕಳಿಲ್ಲದ ಕಾರಣ ಗಂಡು ಮಗುವನ್ನು ಸಿಂದಗಿ ಮೂಲದ ವ್ಯಕ್ತಿಯಿಂದ ಖರೀದಿ ಮಾಡಲಾಗಿತ್ತು. ಅಲ್ಲದೇ ಮಗುವಿನ ತಾಯಿ ಹಾಗೂ ಸಂಬಂಧಿಕರೇ ಮಗುವನ್ನು ಮಾರಾಟ ಮಾಡಿದ್ದರು. ಕಳೆದ ಆಗಸ್ಟ್ 26 ರಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿಯೇ ತನ್ನ ನವಜಾತ ಶಿಶುವನ್ನು ಮಾರಾಟ ಮಾಡಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಸಪ್ಟೆಂಬರ್ 12 ರಂದು ವಿಜಯಪುರ ಮಹಿಳಾ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.