ಕೇಂದ್ರ ಸಚಿವ ಖೂಬಾರಿಂದ ಜನಾಶೀರ್ವಾದ ಕಾರ್ಯಕ್ರಮ | Ballari |
ಇಲ್ಲಿನ ಬಸವ ಭವನದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಬಳಿಕ ಮೊದಲ ಬಾರಿಗೆ ಬಳ್ಳಾರಿಗೆ ಆಗಮಿಸಿದ ಭಗವಂತ ಖೂಬಾ ಅವರ ಜನಾಶೀರ್ವಾದ ಕಾರ್ಯಕ್ರಮ ನಡೆಯಿತು. ಈ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮೋತಿ ಸರ್ಕಲ್ನಲ್ಲಿರುವ ಶ್ರೀ ಬಸವಣ್ಣ, ಸೆಕೆಂಡ್ ಗೇಟ್ ಬಳಿಯ ಶ್ರೀ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಎಸ್ಪಿ ಸರ್ಕಲ್ದಲ್ಲಿರುವ ಶ್ರೀ ವಾಲ್ಮೀಕಿ ಪುತ್ಥಳಿಗೆ ಪುಷ್ಟಮಾಲೆ ಸಮರ್ಪಿಸಿ ಗೌರವ ಸಲ್ಲಿಸಲಾಯಿತು. ಬಳಿಕ ನಗರ ಸಚಿವ ಖೂಬಾ ಶಾಸಕ ಸೋಮಶೇಖರ್ ರೆಡ್ಡಿ ಅವರ ನಿವಾಸದ ಆವರಣದಲ್ಲಿ ಸಚಿವರು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು. ಸಾರಿಗೆ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ, ಸೋಮಲಿಂಗಪ್ಪ, ಮುಂತಾದವರು ಉಪಸ್ಥಿತರಿದ್ದರು.