ಬಸ್ ಅಪಘಾತ ಓರ್ವ ಸಾವು,ಹಲವರಿಗೆ ಗಾಯ

ಘಾಟಿ ಸುಬ್ರಹ್ಮಣ್ಯದಲ್ಲಿ ಮದುವೆ ಆರತಕ್ಷತೆ ಮುಗಿಸಿ, ತೊಂಡೆಬಾವಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, ಓರ್ವ ಸಾವನಪ್ಪಿ ಹಲವರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತನನ್ನು ತೊಂಡೆಬಾವಿ ರೈಲ್ವೆ ಸ್ಟೇಷನ್ ನಿವಾಸಿ ಶಿವಕುಮಾರ್ (55 ವರ್ಷ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15ಕ್ಕು ಹೆಚ್ಚು ಜನರಿಗೆ ಗಾಯಗಳಾಗಿದ್ದು, ನಾಲ್ವರಿಗೆ ತೀವ್ರ ಪೆಟ್ಟಾಗಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.