ಹೆಲಿಕ್ಯಾಪ್ಟರ ದುರಂತದಲ್ಲಿ CDS ಬಿಪಿನ್ ರಾವುತ್ ನಿಧನ | Tamil Nadu |

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಬಿಪಿನ್ ರಾವುತ ನಿಧನರಾಗಿದ್ದಾರೆ. ತಮಿಳುನಾಡಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್ ದಂಪತಿ ನಾಲ್ವರು ಅಧಿಕಾರಿಗಳು ಸೇರಿದಂತೆ ಒಟ್ಟು ಜನ 14 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಆದರೆ ತಮಿಳುನಾಡಿನ ಕೂನೂರು ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಫ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಶಂಕಿಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದರು. ತಕ್ಷಣ ಅವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರಾವತ್ ಸಾವನ್ನಪ್ಪಿದ್ದಾರೆ‌. ಸ್ಥಳದಲ್ಲಿ 13 ಮೃತದೇಹಗಳು ಪತ್ತೆಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಇಬ್ಬರು ಸೇನಾನಿಗಳನ್ನು ಗುರುಸೇವಕ್, ವಿವೇಕ್ ಕುಮಾರ್ ಎಂದು ಗುರುತಿಸಲಾಗಿದೆ. ಉಳಿದವರ ಹೆಸರು ಪತ್ತೆ ಮಾಡಲು DNA test ಮಾಡಲಾಗುತ್ತಿದೆ. ಒಟ್ಟಾರೆ ಭಾರತದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಈ ದುರಂರದಲ್ಲಿ ಸಾವಿಗಿಡಾಗಿರುವುದು ದೇಶಕ್ಕೆ ದೊಡ್ಡ ನಷ್ಟ ಅಂದರೆ ತಪ್ಪಾಗಲಾರದು. ಅಗಲಿದ ಸೇನಾನಿಗಳಿಗೆ ಪ್ರಧಾನಿ ಸೇರಿದಂತೆ ಇಡೀ ದೇಶವೇ ಕಂಬನಿ ಮಿಡಿದಿದೆ.