ಸಿಎಂ ಭೇಟಿಯಾದ ಮಾಲಿಕಯ್ಯ ಗುತ್ತೆದಾರ್: ಸಮುದಾಯದ ಬೇಡಿಕೆ ಈಡೇರಿಸುವಂತೆ ಮನವಿ

ಸಿಎಂ ಭೇಟಿಯಾದ ಮಾಲಿಕಯ್ಯ ಗುತ್ತೆದಾರ್: ಸಮುದಾಯದ ಬೇಡಿಕೆ ಈಡೇರಿಸುವಂತೆ ಮನವಿ
ಬೆಂಗಳೂರು: ಶಾಸಕ ಮಾಲಿಕಯ್ಯ ಗುತ್ತೆದಾರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಬಳಿಕ ಮಾತನಾಡಿದ ಮಾಲಿಕಯ್ಯ ಗುತ್ತೆದಾರ್, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ೫೦೦ ಕೋಟಿ ರೂ. ಮೀಸಲಿಡಬೇಕು. ಈಡಿಗ ಸಮುದಾಯವನ್ನು ಪ್ರವರ್ಗ ೧ ಕ್ಕೆ ಸೇರಿಸಲು ಮನವಿ ಮಾಡಿದ್ದೇವೆ. ಈಡಿಗ ಸಮುದಾಯದ ಕುಲ ಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಅಧ್ಯಯನ ಮಾಡಬೇಕು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ೭೫ ಎಕರೆ ಜಮೀನು ಮಂಜೂರು ಮಾಡಿ ನಾರಾಯಣಗುರು ಪುತ್ಥಳಿ ಅಧ್ಯಯನ ಪೀಠ, ಹಾಸ್ಟೆಲ್ ನಿರ್ಮಾಣ ಮಾಡಲು ಅವಕಾಶ ನೀಡಲು ಮನವಿ ಮಾಡಿದ್ದೇನೆ ಎಂದರು.
ಸಿಗAಧೂರು ಚೌಡೇಶ್ವರಿ ದೇವಸ್ಥಾನ ಮುಜರಾಯಿ ಇಲಾಖೆಗೆ ವಹಿಸದಂತೆ ಮನವಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ೨ ಎಕರೆ ಜಮೀನು ಮಂಜೂರು ಮಾಡಬೇಕು. ಸಾರಾಯಿ ನಿಷೇಧದಿಂದ ಉದ್ಯೋಗ ಕಳೆದುಕೊಂಡ ಸಮುದಾಯದವರಿಗೆ ಎಂಎಸ್ ಐ ಎಲ್ ಪರವಾನಗಿ ನೀಡಬೇಕು ಎಂದು ಮಾಲಿಕಯ್ಯ ಗುತ್ತೇದಾರ್ ಹೇಳಿದರು.