ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಸಮ್ಮತಿ

ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಿಸಲು ಸಿಎಂ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ಹಿನ್ನೆಲೆ ಗಣೇಶೋತ್ಸವ ಆಚರಣೆಗೆ ನಿಬಂಧನೆಗಳನ್ನು ಹೇರಲಾಗಿದ್ದು, ಅದರಲ್ಲೂ ಗಣೇಶೋತ್ಸವವನ್ನು ಕೇವಲ ಐದು ದಿನಗಳಿಗೆ ಮೀಸಲಿಡಲಾಗಿತ್ತು. ಆದರೆ ಇದೀಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಾತ್ರ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್, ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಾಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಬಳಿ 11 ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದೆ. ಇದಕ್ಕೆ ಸಿಎಂ ಸಮ್ಮತಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ ಕೇವಲ ಗಣೇಶೋತ್ಸವ ಆಚರಿಸಲು 5 ದಿನಗಳ ಅವಕಾಶ ನೀಡಲಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ಕೇವಲ 3 ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ.

ತುಂಬಾ ವಿಶೇಷ ಹಾಗೂ ನಿಖರತೆ ಹೊಂದಿರುವ ನ್ಯೂಸ್‌ ಆಪ್ ಡೌನ್ಲೋಡ್ ಮಾಡಿಕೊಳ್ಳಿ...