ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಸಿಎಂ

ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಮಲೆಮಹಾದೇಶ್ವರ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಐದು ವರ್ಷದಲ್ಲಿ ಮಲೆ ಮಹಾದೇಶ್ವರ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮಲೆ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮುಜರಾಯಿ, ವಕ್ಫ್,  ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಮಾತನಾಡಿದರು. ಇನ್ನು ಈ ಬೆಟ್ಟದಲ್ಲಿ 20 ಎಕರೆ ಪ್ರದೇಶದಲ್ಲಿ ನೂರಡಿ ಎತ್ತರದ ಮಾದಪ್ಪನ ಪ್ರತಿಮೆ ನಿರ್ಮಾಣ ಕಾಮಗಾರಿ ಪ್ರಗತಿ ಕುರಿತು ಚರ್ಚಿಸಲಾಯಿತು.  ಕಾರ್ಯಕ್ರಮದಲ್ಲಿ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್, ಶಾಸಕ ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನರೇಂದ್ರ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಮಲೆ ಮಹಾದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.