ಕನಕದಾಸರ 534ನೇ ಜಯಂತ್ಯೋತ್ಸವ ಆಚರಣೆ | Bangalore |
ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ಕ್ಷೇತ್ರದ ನಿಂಬೆಕಾಯಿಪುರದಲ್ಲಿ ಕ್ಷೇತ್ರದ ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಕನಕದಾಸರ 534ನೇ ಜಯಂತ್ಯೋತ್ಸವವನ್ನು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು. ಬಳಿಕ ಮಾತನಾಡಿದ ಎಂಟಿಬಿ ನಾಗರಾಜ್ ಅವರು, ಕನಕದಾಸರು ಯಾವುದೇ ಜಾತಿಗೆ ಸೀಮಿತವಾಗದೆ ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ ಮಹಾಪುರುಷ ಎಂದು ಬಣ್ಣಿಸಿದರು. ಅಂದಿನ ಕಾಲದಲ್ಲಿ ಇಂದಿಗೂ ನಡೆಯುತ್ತಿರುವ ಡಾಂಭಿಕ ಮೌಡ್ಯದ ಅಂಧಾಚರಣೆಗಳನ್ನೂ ತೀಕ್ಷ್ಣವಾಗಿ ಟೀಕಿಸಿದ್ದರು. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರ ಮನಸ್ಸುಗಳನ್ನು ಬದಲಿಸುತ್ತಾ ಸಮಾಜವನ್ನು ಸರಿ ದಾರಿಗೆ ತರಲು ಶ್ರಮಿಸಿದರು ಎಂದರು.