ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಯೋಗ ಶಿಬಿರ

ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದ್ದು, ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು ಎಂದು ಡಾ. ಶ್ರೀಧರ ಹೊಸಮನಿ ಹೇಳಿದರು. ಈ ವೇಳೆ ಮಾತನಾಡಿದ ಡಾ. ಶ್ರೀಧರ ಹೊಸಮನಿ, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದುದು ನಾವು ಸಹ ಸ್ವಚ್ಛತೆ ಕಾಪಾಡಲು ಕೈಕೋಡಿಸಿದರೆ ಪೌರ ಕಾರ್ಮಿಕರ ಕೆಲಸದ ಒತ್ತಡವು ಕಡಿಮೆಯಾಗಲಿದೆ, ಪೌರ ಕಾರ್ಮಿಕರು ಕಾಯಕ ಯೋಗಿಗಳು ಎಂದು ಹೇಳಿದ ಅವತರು ಪೌರಕಾರ್ಮಿಕರೆಲ್ಲರಿಗೂ ಶುಭಾಶಯ ತಿಳಿಸಿದರು. ಇನ್ನು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಹಬ್ಬಳ್ಳಿಯ ಆನಂದ ನಗರದಲ್ಲಿ ಯೋಗ ಶಿಬಿರ ಹಮ್ಮಿಕೊಳ್ಳಲಾಗಿತ್ತು.