ಸುವರ್ಣಸೌಧ ಶಕ್ತಿ ಕೇಂದ್ರವಾಗಿಸಲು ಬದ್ಧ; ಸಿಎಂ ಬೊಮ್ಮಾಯಿ

ಸುವರ್ಣಸೌಧ ಶಕ್ತಿ ಕೇಂದ್ರವಾಗಿಸಲು ಬದ್ಧ; ಸಿಎಂ ಬೊಮ್ಮಾಯಿ

ಸುವರ್ಣಸೌಧ ಶಕ್ತಿ ಕೇಂದ್ರವಾಗಿಸಲು ಬದ್ಧ; ಸಿಎಂ ಬೊಮ್ಮಾಯಿ

ಬೆಳಗಾವಿ: ಡಿಸೆಂಬರ್‌ನಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲಾಗುವುದು ಹಾಗೂ ಸುವರ್ಣಸೌಧಕ್ಕೆ ಸಕ್ಕರೆ ಆಯುಕ್ತಾಲಯ ವರ್ಗಾಯಿಸಲಾಗುವುದು ಎಂದು ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನೆರೆ ಹಾಗೂ ಕೊವಿಡ್೧೯ ಪರಿಸ್ಥಿತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿಕೇಂದ್ರವಾಗಿಸಲು ಬದ್ಧರಿದ್ದೇವೆ. ಡಿಸೆಂಬರ್?ನಲ್ಲಿ ಚಳಿಗಾಲದ ಅಧಿವೇಶನವನ್ನೂ ನಡೆಸಲಿದ್ದೇವೆ ಎಂದ ಅವರು ಸಕ್ಕರೆ ಆಯುಕ್ತಾಲಯ ಬೆಳಗಾವಿಗೆ ಸ್ಥಳಾಂತರಿಸಲು ಆದೇಶ ನೀಡಲಾಗುವುದು ಎಂದರು.
ಸುವರ್ಣಸೌಧ ಸಮರ್ಪಕವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಸಕ್ಕರೆ ಇಲಾಖೆ ವರ್ಗಾವಣೆಗೆ ಆದೇಶಿಸಲಾಗುವುದು. ಬೆಂಗಳೂರಿಗೆ ತೆರಳಿದ ನಂತರ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ಮತ್ತಷ್ಟು ಇಲಾಖೆ ವರ್ಗಾವಣೆ ಆದೇಶ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನೆರೆ, ಕೊರೊನಾ ನಿರ್ವಹಣೆ ಬಗ್ಗೆ ಸಭೆ ನಡೆಸಿದ್ದೇನೆ. ೨ನೇ ಅಲೆ ಸಂದರ್ಭದಲ್ಲಿ ಆಕ್ಸಿಜನ್, ಬೆಡ್?ಗೆ ಬೇಡಿಕೆಯಿತ್ತು. ಕೊರೊನಾ ೩ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸಲು ಹೇಳಿದ್ದೇನೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ಜಿಲ್ಲೆಗಳಲ್ಲಿ ಸಾಕಷ್ಟು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸ್ವತಃ ನಾನೇ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದರಿAದ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದೆ ಎಂದು ಹೇಳಿದರು.
ಇಂದು ವಿಜಯಪುರ, ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಹತ್ತು ಕಡೆ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಗೋಕಾಕ, ಚಿಕ್ಕೋಡಿ, ಸವದತ್ತಿ, ಬೆಳಗಾವಿ ಮತ್ತಿತರ ಕಡೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಇಪ್ಪತ್ತು ದಿನಗಳಲ್ಲಿ ಎಲ್ಲ ಘಟಕಗಳು ಸಿದ್ಧವಾಗಲಿದೆ. ಚಿಕ್ಕೋಡಿಯಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ಕೇಂದ್ರ ತೆರೆಯಲಾಗಿದೆ. ಗೋಕಾಕ್?ನಲ್ಲೂ ಆರ್‌ಟಿಪಿಸಿಆರ್ ಟೆಸ್ಟ್ ಸೆಂಟರ್ ಸ್ಥಾಪಿಸಲಾಗುತ್ತದೆ. ಬೆಂಗಳೂರಿಗೆ ಹೋದ ನಂತರ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
೩ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ವೈದ್ಯಾಧಿಕಾರಿ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಪೌಷ್ಟಿಕಾಂಶದ ಕೊರತೆಯಿರುವ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು. ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹುಬ್ಬಳ್ಳಿ: ಬೆಳಗಾವಿ ಕಾರ್ಯಕ್ರಮಗಳ ಬಳಿಕ ಬಸವರಾಜ ಬೊಮ್ಮಾಯಿ ಹುಬ್ಬಳಿಗೆ ತೆರಳಿದ್ದಾರೆ. ಹುಬ್ಬಳಿಯನ್ನು ಪ್ರಮುಖ ಕೈಗಾರಿಕಾ ಪ್ರದೇಶವನ್ನಾಗಿ ಮಾಡುವ ಚಿಂತನೆ ಇದೆ. ಮುಂಬೈ ಕರ್ನಾಟಕದ ಕೈಗಾರಿಕಾ ಪ್ರದೇಶವನ್ನಾಗಿ ಮಾಡ್ತೇವೆ. ಹುಬ್ಬಳ್ಳಿ ಅಭಿವೃದ್ಧಿ ಬಗ್ಗೆ ಜಗದೀಶ್ ಶೆಟ್ಟರ್, ಪ್ರಲ್ಹಾದ್ ಜೋಶಿ ಜತೆ ಚರ್ಚಿಸುತ್ತೇನೆ ಎಂದು ಹುಬ್ಬಳ್ಳಿ ನಿವಾಸದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಯಾರೋ ಒಬ್ಬರನ್ನ ಉಸ್ತುವಾರಿ ಮಾಡಬೇಕು. ಮುಂದಿನ ದಿನಗಳಲ್ಲಿ ಉಸ್ತುವಾರಿ ಸಚಿವರನ್ನು ಮಾಡುತ್ತೇವೆ. ನನ್ನ ಜೊತೆಗೆ ಆನಂದ್? ಸಿಂಗ್ ನಿರಂತರ ಸಂಪರ್ಕದಲ್ಲಿದ್ದಾರೆ. ಸಂಪುಟ ಸಭೆಗೆ ಹಾಜರಾಗದಿದ್ದರೂ ಅವರು ಸಂರ್ಪಕದಲ್ಲಿದ್ದಾರೆ ಎಂದು ತಿಳಿಸಿದರು.