ಜಿಲ್ಲಾಧಿಕಾರಿಗಳ ವರ್ಗಾವಣೆಗೆ ರೆವಿನ್ಯೂ ಸೆಕ್ರೆಟರಿಗೆ ದೂರು

ರೈತರ ಬಗ್ಗೆ ಹಗುರವಾಗಿ ಮಾತನಾಡಿರುವ ಬಣ್ಣಾರಿ ಶುಗರ್ ಕಾರ್ಖಾನೆ ಉಪಾಧ್ಯಕ್ಷ ಶರವಣ್ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರು ಹಾಗೂ ಜಿಲ್ಲಾ ರೈತ ಸಂಘದ ವತಿಯಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಐದನೇ ದಿನಕ್ಕೂ ಮುಂದುವರೆದರೂ ಜಿಲ್ಲಾಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಹಾಗಾಗಿ ಅವರ ಧೋರಣೆಯನ್ನು ಖಂಡಿಸಿ ಡಾ ಎಂ.ಆರ್.ರವಿ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್ ರೈತರಿಗೆ ಟ್ರಿಕ್ಕಿ ಲೆಟರ್ ನೀಡಿ ಮೋಸಮಾಡುತ್ತಿರುವ ಜಿಲ್ಲಾಧಿಕಾರಿಗಳ ಧೋರಣೆಯನ್ನು ಖಂಡಿಸಿ ವರ್ಗಾವಣೆ ಮಾಡಲು ಒತ್ತಾಯಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ರೆವಿನ್ಯೂ ಸೆಕ್ರೆಟರಿಗೆ ತಿಳಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಕಡಬೂರು ಮಂಜುನಾಥ್ ಸೇರಿದಂತೆ ಗುಂಡ್ಲುಪೇಟೆ ವಿಭಾಗದ ರೈತರು ಭಾಗವಹಿಸಿದ್ದರು.