೧೦ನೇ ತರಗತಿಯಲ್ಲಿ ಉತ್ತೀರ್ಣವಾದ ವಿಕಲಚೇತನ ವಿದ್ಯಾರ್ಥಿಗಳಿಗೆ ಅಭಿನಂದನೆ.
ಗುಡ್ಲುಪೇಟೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲೂಕಿನ ಸುಮಾರು ೨೨ ಮಂದಿ ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಭಿನಂದಿಸಿ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸನ್ಮಾನಿಸಿದರು. ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಶಿಕ್ಷಣಾಧಿಕಾರಿ ಶಿವಮೂರ್ತಿ ಹಾಜರಿದ್ದರು.