ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಗಾಂಧಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿತ್ತು. ಆದ್ರೆ ಪ್ರತಿಭಟನೆ ಮೂಲಕ ಆಚರಣೆ ಮಾಡುತ್ತಿರುವುದು ಖೇದಕರ ಎಂದರು