ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಆಯ್ಕೆಗೆ ಶಕ್ತಿ ಮೀರಿ ಪ್ರಯತ್ನ |Gokak|
ಚುನಾವಣೆ ಆರಂಭದಿಂದಲೂ ಕಾಂಗ್ರೆಸ್ ಪಕ್ಷದಿಂದ ಪ್ರಚಾರ ನಡೆಯುತ್ತಿದ್ದು, ನಿರಂತರವಾಗಿ ಮುಖಂಡರ ಸಭೆಗಳನ್ನು ಮಾಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ ಪಟ್ಟಣದ ಹಿಲ್ ಗಾರ್ಡನ್ ಕಚೇರಿಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಭಾವಿ, ಗೋಕಾಕ ಮತ ಕ್ಷೇತ್ರದಲ್ಲಿ ನಮ್ಮದು ಸೀಮಿತ ಸಂಖ್ಯೆ ಇದ್ದು, ಹೆಚ್ಚಿನ ಮತ ಪಡೆಯಲು ಪ್ರಯತ್ನಿಸಲಾಗುವುದು ಎಂದರು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಒಳ್ಳೆಯ ಅಭ್ಯರ್ಥಿಯಾಗಿದ್ದು, ಯುವಕರು ಆಗಿದ್ದಾರೆ. ಪಕ್ಷದಲ್ಲಿ ಬೆಳೆಯಲು ಅವರಿಗೆ ಅವಕಾಶ ಇದ್ದು, ಅವರ ಆಯ್ಕೆಗೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದರು.