ಬೆಳಗಾವಿ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಯು ಗೆದ್ದೇ ಗೆಲ್ಲುತ್ತಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ ವಿಧಾನ ಪರಿಷತ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಿರುಸಿನ ಪ್ರಚಾರ ನಡೆಸಿದರು.ಪಟ್ಟಣದ ರತ್ನ ಸಂಗಮ ಸಭಾ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜಿಲ್ಲೆಯಾದ್ಯಂತ ಒಂದು ಸುತ್ತು ಪ್ರಚಾರ ಮಾಡಿದ್ದೇವೆ. ನಮ್ಮ ಕಾಂಗ್ರೆಸ್ ಅಭ್ಯರ್ಥಿಯ ಗೆಲವು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಗೆಲುವಿಗಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ.ಹೀಗಾಗಿ ನಮ್ಮ ಅಭ್ಯರ್ಥಿಯು ಗೆಲ್ಲುವುದರಲ್ಲಿ ಸಂಶಯವೇ ಇಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಯುವ ಕಾಂಗ್ರೆಸ್ ರಾಜ್ಯ ವಕ್ತಾರರಾಗಿ ಆಯ್ಕೆಯಾದ ಗೋಪಾಲ್ ದಳವಾಯಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸವದತ್ತಿ ಕಾಂಗ್ರೆಸ್ ಮುಖಂಡರುಗಳಾದ ಪಂಚನಗೌಡ ದ್ಯಾಮನಗೌಡ, ವಿಶ್ವಾಸ್ ವೈದ್ಯ, ಸೌರಬ್ ಚೋಪ್ರಾ, ಮತ್ತಿತರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.