ಗ್ರಾಪಂ ಗೆ ಶಕ್ತಿ ನೀಡಿದ್ದು ಕಾಂಗ್ರೆಸ್ | Hubli | Congress | D K Shivakumar |

ಕಾಂಗ್ರೆಸ್ ಏನು ಮಾಡಿದೆ ಅಂತಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗ್ರಾಪಂ ಸದಸ್ಯರಿಗೆ ಗೊತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನರೇಗಾ ಮೂಲಕ ಕೋಟ್ಯಾಂತರ ಹಣ ಹರಿದುಬರುತ್ತಿದೆ ಗ್ರಾಪಂ ಗೆ ಶಕ್ತಿ ನೀಡಿದ್ದು, ಮೀಸಲಾತಿ, ಅನುದಾನ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದರು. ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಈಶ್ವರಪ್ಪ ಸವಾಲು ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಿಗೆ ಚರ್ಚೆಗೆ ಬರಬೇಕು ಹೇಳಲಿ. ಚರ್ಚೆಗೆ ಸಿದ್ಧ ಎಂದು ಹೇಳಿದರು.