ಕಾಂಗ್ರೆಸ್‌ನಿಂದ ಗೂಂಡಾಗಿರಿ ಪ್ರವೃತ್ತಿ: ಗಣೇಶ್ ಕಾರ್ಣಿಕ್

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪದ ವೇಳೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ದಾಂಧಲೆ ನಡೆಸಿದ ಕಾಂಗ್ರೆಸ್ ಗೂಂಡಾಗಿರಿ ಪ್ರವೃತ್ತಿಯನ್ನು ದೇಶಕ್ಕೆ ಪ್ರದರ್ಶಿಸಿದೆ ಎಂದು ರಾಜ್ಯ ಬಿಜೆಪಿಯ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸಂಸದ ಎಲ್.ಹನುಮಂತಯ್ಯ ಮತ್ತು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಬಿಜೆಪಿ ಕುರಿತು ಆಡಿರುವ ಮಾತುಗಳು 'ದೆವ್ವದ ಬಾಯಿಯಿಂದ ಬೈಬಲ್' ನುಡಿದಂತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಕಲಾಪ ಧಿಕ್ಕರಿಸಿದ್ದು, ಮಾತ್ರವಲ್ಲದೇ ಯಾವುದೇ ಚರ್ಚೆ ನಡೆಯದಂತೆ ತಡೆಯೊಡ್ಡಿ ಸಭ್ಯತೆಯ ಎಲ್ಲೆ ಮೀರಿದೆ ಎಂದು ಕಾರ್ಣಿಕ್ ಹೇಳಿದ್ದಾರೆ.