ಕಾಂಗ್ರೆಸ್ ಕೊಲೆಗಡುಕ ಸರ್ಕಾರವಾಗಿತ್ತು: ನಳೀನಕುಮಾರ ಕಟೀಲ್

ಹುಬ್ಬಳ್ಳಿ

ಕೊಲೆಗಡುಕ ಸರ್ಕಾರ ಅವರದ್ದೇ ಇತ್ತು. ಅವರೇ ಕೊಲೆ ಗಡುಕರು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿರುವುದು. ಸಿದ್ಧರಾಮಯ್ಯ ಅವರ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಂದು ಬಾರಿ ಕಾಂಗ್ರೆಸ್ನ ಇತಿಹಾಸ ನೋಡಬೇಕು. ಒಂದು ಕಾಲಘಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಹಲವಾರು ಸಾಧುಗಳನ್ನು ಗುಂಡಿಟ್ಟು ಕೊಂದಿದ್ದರು. ಸಿದ್ದರಾಮಯ್ಯ ಸಿಎಂ ಇದ್ದಾಗ ಅವರು ಮರೆತಿದ್ದಾರೆ ಪಾಪ ಎಂದು ಲೇವಡಿ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಭಾರತೀಯ ಜನತಾ ಪಕ್ಷದ ಜನಪರ ಕಾರ್ಯಗಳ ಭಾವಚಿತ್ರ ಹಾಗೂ ಫಲಕಗಳನ್ನು ವೀಕ್ಷಿಸಿದರು. ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಅಭಿನಂದನೆ ಅಭಿಯಾನಕ್ಕೆ ಚಾಲನೆ ನೀಡಿ, ಫೆÇೀಟೋ ತೆಗೆಸಿಕೊಳ್ಳುವ ಮೂಲಕ ನರೇಂದ್ರ ಮೋದಿಯವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು