ಸಂವಿಧಾನ ಸಮರ್ಪಣಾ ದಿನ ಆಚರಣೆ | Bangalore |
ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರದ ಪೈ ಲೇಔಟ್ ನಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಬಳಿಕ ಮಾತನಾಡಿದ ಕರ್ನಾಟಕ ಸಮತ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಿದರೆ, ಸಂವಿಧಾನದಲ್ಲಿ ಪ್ರತಿಪಾದಿಸಿದಂತೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಸಿಗುತ್ತದೆ. ಪ್ರತಿಯೊಬ್ಬರಿಗೂ ಆಹಾರ, ಧರ್ಮ, ಬಟ್ಟೆ, ಜೀವನ ಶೈಲಿಯ ಹಕ್ಕು ನೀಡಲಾಗಿದೆ. ಆದರೆ, ಇವತ್ತು ಇದೇ ಅಂಶಗಳನ್ನು ಮುಂದಿಟ್ಟುಕೊಂಡು ಶೋಷಿತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು. ಕೆಪಿಸಿಸಿ ಎಸ್ಸಿ ಘಟಕದ ಉಪಾಧ್ಯಕ್ಷ ನಲ್ಲೂರಹಳ್ಳಿ ನಾಗೇಶ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಾವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಲು ಸಾಧ್ಯವಾಗಿದೆ ಎಂದರು.