ನವೋದಯಾ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ |Chikkamagaluru|

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರೋ ವಸತಿ ಶಾಲೆಯಾದ ನವೋದಯಾ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 40 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯು ಒಟ್ಟು ಇದೇ ಶಾಲೆಯ 418 ವಿದ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದಿತ್ತು.ಕೊರೋನಾ ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲ. ಆದರೂ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ. ಸ್ಥಳಕ್ಕೆ ಡಿ.ಎಚ್.ಓ, ಸರ್ವೇಕ್ಷಣಾಧಿಕಾರಿ, ಆರೋಗ್ಯ ಸಿಬ್ಬಂದಿ ಭೇಟಿ ಮಾಡಿ, ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜಿಸಲಾಗಿದೆ.