ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು | Bangalore | College |
ಬೆಂಗಳೂರು ಹೊರಮಾವು ನರ್ಸಿಂಗ್ ಕಾಲೇಜು ಹಾಗೂ ಕೆಜಿಎಫ್ನ ನರ್ಸಿಂಗ್ ಕಾಲೇಜಿನಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಹೊರರಾಜ್ಯದಿಂದ ವಿದ್ಯಾರ್ಥಿಗಳು ಬರುವುದರಿಂದ ಶಿಕ್ಷಣ ಸಂಸ್ಥೆಗಳು ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹೊರಮಾವು ಕ್ರಿಸ್ಟಿಯನ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 300 ಮಂದಿ ಪೈಕಿ 34 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾತ್ಕಾಲಿಕವಾಗಿ ಕಾಲೇಜು ಮುಚ್ಚಿಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಹೊರಮಾವು ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕೇರಳ ಮತ್ತು ಪಶ್ಚಿಮ ಬಂಗಾಳದಿಂದ ಬಂದವರಾಗಿದ್ದಾರೆ. 600 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಬಹುತೇಕ ಲಕ್ಷಣರಹಿತರಾಗಿದ್ದಾರೆ. ಇವರೆಲ್ಲರೂ ಕೇರಳದಿಂದ ಬಂದಿದ್ದು, ಇವರ ಮಾದರಿಯನ್ನು ಜೀನೋಮಿಕ್ ಸೀಕ್ವೆನ್ಸ್ ಗೂ ಕಳುಹಿಸಲಾಗುವುದು ಎಂದು ತಿಳಿಸಿದರು.