ಕೋವಿಡ್ 3ನೇ ಅಲೆ ಭೀತಿ; ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ
ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 26,727 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,37,66,707ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 277 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 448339 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 275224 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 28246 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33043144 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 15,20,899 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 64,40,451 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 89,02,08,007 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.