ಮಾಜಿ ಸಿಎಂ ಕುಮಾರಸ್ವಾಮಿ ಅವರಿಂದ ಕೋವಿಡ್ ನಿಯಮ ಉಲ್ಲಂಘನೆ | Gadag | Kumaraswamy
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿಯಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋವಿಡ್ ರೂಲ್ ಬ್ರೇಕ್ ಮಾಡಿದ್ದಾರೆ. ಅಲ್ಲದೇ ಸೂರಣಗಿ ಬಸ್ ನಿಲ್ದಾಣದಲ್ಲಿ ಯಾವುದೇ ಅನುಮತಿ ಇಲ್ಲದೇ ಸಭೆ ನಡೆಸಿದ್ದು, ಇದರಲ್ಲಿ ಜನರು ಗುಂಪು ಗುಂಪಾಗಿ ಸೇರಿ ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ಜೆಡಿಎಸ್ ನಾಯಕರು ಕೂಡ ಯಾವುದೇ ನಿಯಮಗಳನ್ನು ಪಾಲನೆ ಮಾಡದೇ ಮನಬಂದಂತೆ ನಡೆದುಕೊಂಡಿದ್ದಾರೆ.