'ದಕ್ಷಿಣ ಕನ್ನಡ: 6-8ನೇ ತರಗತಿ ಆರಂಭ ಸದ್ಯಕ್ಕಿಲ್ಲ'

'ದಕ್ಷಿಣ ಕನ್ನಡ: 6-8ನೇ ತರಗತಿ ಆರಂಭ ಸದ್ಯಕ್ಕಿಲ್ಲ'

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6ರಿಂದ 8ನೇ ತರಗತಿವರೆಗೆ ಭೌತಿಕ ತರಗತಿಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಗಡಿ ಜಿಲ್ಲೆಯಾಗಿರುವ ಕಾರಣ ಮತ್ತು ಇಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಭೌತಿಕ ತರಗತಿಗಳು ಆರಂಭವಾಗಿಲ್ಲ. ಈ ಸಂಬಂಧ ಸೆಪ್ಟೆಂಬರ್ 13ರ ನಂತರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.