ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ, ದಲಿತ ಸಂಘರ್ಷ ಸಮಿತಿ ಆಗ್ರಹ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ಮಾದಿಗ ಯುವತಿಗೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಸುಟ್ಟ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ, ಭಾರತೀಯ ದಲಿತ ಸಂಘರ್ಷ ಸಮಿತಿಯವರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಾದಿಗ ಸಮಾಜದ ಪಾಲಮ್ಮನಿಗೆ ನ್ಯಾಯಬೇಕು ಎಂದು ಆಗ್ರಹಿಸಿ, ಆತ್ಯಾಚಾರಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆರೋಪಿಗಳ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದ್ರು. ದೇಶಕ್ಕೆ ಸ್ವತಂತ್ರ ಬಂದು 7ದಶಕಗಳು ಕಳೆದರು, ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಿಂತಿಲ್ಲ. ಇಂತಾ ಕೃತ್ಯಗಳಿಂದ ಇಡೀ ಮನಕುಲವು ತೆಲೆ ತಗ್ಗಿಸುವಂತಾಗಿದೆ. ಇಂತಾ ಹೀನ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ, ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲದೆ ಹೋದ್ರೆ ರಾಜ್ಯಾದ್ಯಂತ ದಲಿತ ಸಂಘರ್ಷ ಸಮಿತಿವರು ಉಗ್ರಾ ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.