ಚಾರ್ಮಾಡಿ ಘಾಟ್ ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | Chikmagalur |
ಚಾರ್ಮಾಡಿ ಘಾಟ್ ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ವ್ಯಕ್ತಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಮಣ್ಣಿನಡಿ ಹೂತ್ತಿಟ್ಟಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಗ್ರಾಮದ ಬಳಿ ನಡೆದಿದೆ. ಬಾಳೂರು ಗ್ರಾಮದ ನಾಗೇಶ್ ಆಚಾರ್ ಮೃತ ದುರ್ದೈವಿ. ಪ್ರಕರಣ ಸಂಬಂಧ ಕೃಷ್ಣೇಗೌಡ, ಉದಯ್, ಪ್ರದೀಪ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.5 ದಿನಗಳ ಹಿಂದೆ ನಾಗೇಶ್ ರನ್ನ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದ ಕೃಷ್ಣೇಗೌಡ ಕೊಲೆ ಮಾಡಿ, ಮಣ್ಣಿನಡಿ ಹೂತಿಟ್ಟಿದ್ದರು. ಇದೀಗ ಘಟನೆ ಬೆಳಕಿಗೆ ಬಂದಿದ್ದು ಬಾಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.