ಅರಣ್ಯ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ
ಚಿಕ್ಕಮಗಳೂರು
ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದ ಹೊನ್ನಾಳ ಗ್ರಾಮ ಸಮೀಪದ ಅರಣ್ಯದಲ್ಲಿ ಮದ್ಯಪಾನ ಮಾಡುತ್ತಿರುವುದನ್ನ ಪ್ರಶ್ನಿಸಿದ್ದಕ್ಕೆ ಅರಣ್ಯ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ರಂಗಸ್ವಾಮಿ, ಮಂಜುನಾಥ್ ಎಂಬುವವರ ಮೇಲೆ ರವಿ, ಕೃಷ್ಣಪ್ಪ, ನಟರಾಜ್ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಮಲ್ಲಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.