ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅದರ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ: ಅಲಹಾಬಾದ್ ಹೈಕೋರ್ಟ್
ನವದೆಹಲಿ: ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ.
ಲೈವ್ ಲಾ ಪ್ರಕಾರ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದೆ.
“… ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ದುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಹಸುವನ್ನು ಹತ್ಯೆ ಮಾಡಿದ ಆರೋಪ ಹೊತ್ತಿರುವ ಜಾವೇದ್ ಗೆ ಜಾಮೀನು ನಿರಾಕರಿಸುವಾಗ ನ್ಯಾಯಾಲಯ ಹೇಳಿದೆ.
ಲೈವ್‌ಲಾ ವರದಿಯ ಪ್ರಕಾರ, ಮೂಲಭೂತ ಹಕ್ಕು ಕೇವಲ ಗೋಮಾಂಸ ಭಕ್ಷಕರ ಪರಮಾಧಿಕಾರವಲ್ಲ, ಬದಲಾಗಿ, ಹಸುವನ್ನು ಪೂಜಿಸುವವರು ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿದ್ದಾರೆ, ಅರ್ಥಪೂರ್ಣವಾದ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಕೊಲ್ಲುವ ಹಕ್ಕಿನ ಮೇಲೆ ಬದುಕುವ ಹಕ್ಕಿದೆ ಮತ್ತು ಗೋಮಾಂಸ ತಿನ್ನುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಹಸು ವಯಸ್ಸಾದಾಗ ಮತ್ತು ಅನಾರೋಗ್ಯದಿಂದ ಕೂಡ ಉಪಯುಕ್ತವಾಗಿದೆ, ಮತ್ತು ಗೋವಿನ ಸಗಣಿ ಮತ್ತು ಮೂತ್ರವು ಕೃಷಿಗೆ, ಔಷಧಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ತಾಯಿಯಾಗಿ ಪೂಜಿಸಲ್ಪಡುವವಳು ವೃದ್ಧೆ ಅಥವಾ ಅನಾರೋಗ್ಯಕ್ಕೆ ಒಳಗಾಗುತ್ತಾಳೆ. ಅವಳನ್ನು ಕೊಲ್ಲುವ ಹಕ್ಕನ್ನು ಯಾರಿಗೂ ನೀಡಲಾಗುವುದಿಲ್ಲ, “ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
“ಕೇವಲ ಹಸುಗಳ ಮಹತ್ವವನ್ನು ಹಿಂದೂಗಳು ಅರ್ಥಮಾಡಿಕೊಂಡಿಲ್ಲ, ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಭಾರತದ ಸಂಸ್ಕೃತಿಯ ಒಂದು ಪ್ರಮುಖ ಭಾಗವೆಂದು ಪರಿಗಣಿಸಿದ್ದಾರೆ. 5 ಮುಸ್ಲಿಂ ಆಡಳಿತಗಾರರು ಗೋಹತ್ಯೆಯನ್ನು ನಿಷೇಧಿಸಿದರು. ಬಾಬರ್, ಹುಮಾಯೂನ್ ಮತ್ತು ಅಕ್ಬರ್ ಕೂಡ ನಿಷೇಧಿಸಿದ್ದರು. ಅವರ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿಕೊಡುವುದು ನಿಷೇಧಿಸಿದ್ದರು. ಮೈಸೂರಿನ ನವಾಬ, ಹೈದರ್ ಅಲಿ, ಗೋಹತ್ಯೆಯನ್ನು ಶಿಕ್ಷಾರ್ಹ ಅಪರಾಧವಾಗಿಸಿದ್ದರು ಎಂದು ಅದು ಹೇಳಿದೆ.
ವಿಭಿನ್ನ ಧರ್ಮಕ್ಕೆ ಸೇರಿದ ಎಲ್ಲರೂ ನೆಲೆಸಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ. ಪ್ರತಿಯೊಬ್ಬರು ಒಂದೊಂದು ದೇವರನ್ನು ಪೂಜಿಸಬಹುದು. ಆದರೆ ದೇಶದ ದೃಷ್ಟಿಯಿಂದ ಅವರೆಲ್ಲರ ಆಲೋಚನೆ ಒಂದೇ ರೀತಿಯಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. “ದೇಶವನ್ನು ಒಗ್ಗೂಡಿಸಲು ಮತ್ತು ನಂಬಿಕೆಯನ್ನು ಬೆಂಬಲಿಸುವ ದೃಷ್ಟಿಯಿಂದ ಎಲ್ಲರೂ ಹೆಜ್ಜೆ ಇಟ್ಟರೆ ಕೆಲವರ ನಂಬಿಕೆಗಳು ದೇಶದ ಹಿತಾಸಕ್ತಿಗೆ ಪೂರಕವಾಗಿಲ್ಲ. ಈ ರೀತಿ ಮಾತನಾಡುವ ಮೂಲಕ ಅವರು ದೇಶವನ್ನು ದುರ್ಬಲಗೊಳಿಸುತ್ತಾರೆ… ಹೀಗಾಗಿ, ಅರ್ಜಿದಾರರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ರುಜುವಾತಾಗಿವೆ” ಎಂದು ನ್ಯಾಯಾಲಯ ಹೇಳಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಹೇಳಿದೆ.
ಆರೋಪಿ ಮೊದಲ ಬಾರಿಗೆ ಅಪರಾಧ ಎಸಗಿಲ್ಲ. ಹಿಂದೆಯೂ ಅವರು ಗೋವಧೆ ಮಾಡಿದ್ದಾರೆ. ಇದು ಸಮಾಜದಲ್ಲಿ ಶಾಂತಿಭಂಗ ಉಂಟು ಮಾಡಿದ್ದು, ಅವರಿಗೆ ಜಾಮೀನು ನೀಡಿದರೆ ಅವರು ಮತ್ತದೇ ಕೆಲಸ ಮಾಡುವ ಮೂಲಕ ಸಾಮರಸ್ಯ ಕದಡಲಿದ್ದಾರೆ. ಹೀಗಾಗಿ, ಆರೋಪಿಯ ಜಾಮೀನು ಮನವಿಯು ಆಧಾರರಹಿತವಾಗಿದ್ದು, ವಜಾಕ್ಕೆ ಅರ್ಹವಾಗಿದೆ. ಆದ್ದರಿಂದ ಜಾಮೀನು ಮನವಿ ವಜಾ ಮಾಡಲಾಗಿದೆ” ಎಂದು ಪೀಠ ಹೇಳಿದೆ ಎಂದು ವರದಿ ತಿಳಿಸಿದೆ.