ದೇಶದ ಮೊದಲ ಸ್ಮಾಗ್‌ ಟವರ್‌ ಅನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಉದ್ಘಾಟಿಸಿದರು

ದೇಶದ ಮೊದಲ ಸ್ಮಾಗ್‌ ಟವರ್‌ ಅನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಉದ್ಘಾಟಿಸಿದರು

ದೆಹಲಿ : ದೆಹಲಿಯ ಕನಾಟ್ ಪ್ರದೇಶದಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ಸ್ಮಾಗ್‌ ಟವರ್‌ ಅನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಉದ್ಘಾಟಿಸಿದರು.

ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದೊಂದಿಗೆ ಕನಾಟ್‌ ಪ್ರದೇಶದಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ಸ್ಮಾಗ್‌ ಟವರ್‌ ಅನ್ನು (ಗಾಳಿ ಶುದ್ಧೀಕರಣ ಯಂತ್ರ) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸೋಮವಾರ ಉದ್ಘಾಟಿಸಿದರು. ಈ ಟವರ್‌ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ಸೆಕೆಂಡಿಗೆ 1,000 ಘನ ಮೀಟರ್‌ನಷ್ಟು ಗಾಳಿಯನ್ನು ಶುದ್ಧೀಕರಿಸಲಿದೆ.

'ಈ ಗಾಳಿ ಶುದ್ಧೀಕರಣ ಯಂತ್ರವನ್ನು ಪ್ರಾಯೋಗಿಕ ಯೋಜನೆ ರೂಪದಲ್ಲಿ ಸ್ಥಾಪಿಸಲಾಗಿದೆ. ಒಂದು ತಿಂಗಳೊಳಗೆ ಆರಂಭಿಕ ಗುಣಲಕ್ಷಣಗಳು ಲಭ್ಯವಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ದೆಹಲಿಯ ಇತರೆ ಭಾಗಗಳಲ್ಲೂ ಸ್ಮಾಗ್‌ ಟವರ್‌ ಅನ್ನು ಸ್ಥಾಪಿಸಲಾಗುವುದು' ಎಂದು ಅವರು ಮಾಹಿತಿ ನೀಡಿದರು.

'ಗಾಳಿ ಶುದ್ಧೀಕರಣ ಯಂತ್ರದ ಪರಿಣಾಮಕಾರಿತ್ವವನ್ನು ಪರಿಶೀಲಿಸಲು ಎರಡು ವರ್ಷಗಳ ಪ್ರಾಯೋಗಿಕ ಅಧ್ಯಯನವನ್ನು ನಡೆಸಲಾಗುವುದು' ಎಂದು ಈ ಹಿಂದೆ ಅಧಿಕಾರಿಗಳು ಹೇಳಿದ್ದರು. ಈ ಟವರ್‌ನ ಕಾರ್ಯಕ್ಷಮತೆ ಮೇಲೆ ನಿಗಾವಹಿಸಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.